ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸಂಘ ಮಾ.11ರಂದು ಪ್ರತಿಭಟನೆ : ರಾಜ್ಯಾಧ್ಯಕ್ಷ ರಮೇಶ್.

ಹದ್ದಿನಕಣ್ಣು ನ್ಯೂಸ್ 10-03-2026
ಬೆಂಗಳೂರು : ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘವು ಮಾ.11ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ರಮೇಶ್ ತಿಳಿಸಿದ್ದಾರೆ. 
ಮಾ.09 ರಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಕಚೇರಿಯಲ್ಲಿ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದ ಅವರು "ಸುಪ್ರೀಂ ಕೋರ್ಟ್ ನ ಆದೇಶದ ಅನ್ವಯ 2025 ಏಪ್ರಿಲ್‌ನಲ್ಲಿ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದಿರುವ ಹಾಗೂ ವಿವಿಧ ಹಂತಗಳಲ್ಲಿ ನಿರ್ಮಾಣ ಹಂತದಲ್ಲಿರುವ, ಪೂರ್ಣಗೊಂಡಿರುವ ಕಟ್ಟಡಗಳಿಗೆ ಪೂರ್ಣ ಪ್ರಮಾಣ ಪತ್ರ (ಓ.ಸಿ) ಅಥವಾ ವಾಸಯೋಗ್ಯ ಪ್ರಮಾಣ ಪತ್ರ ನೀಡುವ ಕುರಿತು ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಬೇಕು ಎಂದರು.
ರಾಜ್ಯಾದ್ಯಂತ ಲಕ್ಷಾಂತರ ಗ್ರಾಹಕರು ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು, ಭೂ ಪರಿವರ್ತಿತ ಹಾಗೂ ಭೂ ಪರಿವರ್ತನೆಯಾಗದ ಪ್ರದೇಶಗಳು ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿರುವ ಸ್ಥಳಗಲ್ಲಿ ಕಟ್ಟಡ ನಿರ್ಮಾಣ ಕಾರ್ಯಗಳನ್ನು ಬ್ಯಾಂಕ್‌ಗಳಿಂದ ಸಾಲ ಪಡೆದು ವಿವಿಧ ಹಂತಗಳಲ್ಲಿ ನಡೆಸುತ್ತಿದ್ದಾರೆ,ಇಂತಹ ಪರಿಸ್ಥಿತಿಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಾಲಯದ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದಲ್ಲಿ ರಾಜ್ಯದ ಲಕ್ಷಾಂತರ ನಾಗರಿಕರಿಗೆ ಆರ್ಥಿಕ, ಮಾನಸಿಕ ಮತ್ತು ಸಾಮಾಜಿಕ ಸಮಸ್ಯೆ ಎದುರಾಗುತ್ತದೆ, ಈ ಹಿನ್ನೆಲೆಯಲ್ಲಿ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದಿರುವ, ಅರ್ಜಿ ಸಲ್ಲಿಸಿರುವ, ಮಂಜೂರಾತಿ ಪಡೆದಿರುವ ಕಾರ್ಯಾದೇಶಗೊಂಡಿರುವ ಕಟ್ಟಡಗಳಿಗೆ ಸೂಕ್ತ ವಿನಾಯಿತಿ ನೀಡುವ ಮೂಲಕ ಈಗಾಗಲೇ ನಿರ್ಮಾಣಗೊಂಡಿರುವ ಕಟ್ಟಡಗಳ ಗ್ರಾಹಕರಿಗೆ ಅನುಕೂಲವಾಗುವಂತೆ ಸರ್ಕಾರ ಕ್ರಮಕೈಗೊಳ್ಳಬೇಕು ಎಂದರು.

ಯಾವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರ ಕಡ್ಡಾಯ ಎಂಬುದನ್ನು ಸ್ಪಷ್ಟಪಡಿಸಬೇಕು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಂಬಂಧಪಟ್ಟ ಇಲಾಖೆಯಿಂದ ಕಟ್ಟಡದ ನಕ್ಷೆಗೆ ಅನುಮೋದನೆ ಪಡೆಯದೇ ನಿರ್ಮಾಣ ಗೊಂಡ ಕಟ್ಟಡಗಳಿಗೆ ಸಂಬಂಧಿಸಿದ ಲಕ್ಷಾಂತರ ಅರ್ಜಿಗಳು ಬಾಕಿ ಇರುವುದರಿಂದ ಅವುಗಳನ್ನು ಒಮ್ಮೆಯ ಕ್ರಮವಾಗಿ ಪರಿಹರಿಸಲು ವಿಶೇಷ ಕಾನೂನು ರೂಪಿಸುವ ಬಗ್ಗೆ ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಬೇಕು. ಎಂಎಸ್‌ ಎಂಇ ಪ್ರಮಾಣ ಪತ್ರದ ಮೂಲಕ ವಿದ್ಯುತ್ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸುತ್ತಿದ್ದು, ಸಂಪರ್ಕ ನೀಡುವುದಕ್ಕೆ ಕೆಲ ಸಮಸ್ಯೆಗಳು ಉದ್ಭವಿಸಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ಮಾರ್ಗಸೂಚಿಗಳನ್ನು ನೀಡಬೇಕೆಂದು" ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ವಿ.ಚಂದ್ರಬಾಬು ಒತ್ತಾಯಿಸಿದರು.

ಈ ಬಗ್ಗೆ ಶೀಘ್ರವಾಗಿ ನಿರ್ದಾರ ಕೈಗೊಳ್ಳುವಂತೆ ಒತ್ತಾಯಿಸಿ ಮಾ.11ರಂದು ಬೆಳಗ್ಗೆ 10.30ಕ್ಕೆ ಪ್ರೀಡಂ ಪಾರ್ಕ್ ನಲ್ಲಿ ಬಹೃತ್ ಪ್ರತಿಭಟನೆ ನಡೆಸಲು ಸಂಘ ನಿರ್ಧರಿಸಿದೆ, 
ಅದ್ದರಿಂದ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಲಿರುವ ಸಂಘದ ಸದಸ್ಯರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ರಮೇಶ್ ಸೋಮವಾರ ಸುದ್ದಿಗೋಷ್ಠಿ ಯಲ್ಲಿ ತಿಳಿಸಿದರು.

ಬ್ಯೂರೋ ವರದಿ

Popular posts from this blog

ಅರಬಿಳಚಿ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಖಾಲಿ ಇರುವ ಕ್ಲರ್ಕ್ ಕಂ ಡಾಟಾ ಎಂಟ್ರಿ ಅಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ.

ಹಾರನಹಳ್ಳಿ ಗೃಹರಕ್ಷಕದಳ ಘಟಕದ ವತಿಯಿಂದ ಮಹಿಳೆಯರಿಗೆ ಸನ್ಮಾನ.

ಭದ್ರಾವತಿ ನಗರದ ಮೂಲೆಕಟ್ಟೆಯಲ್ಲಿ ಕಾರು ಬೈಕ್ ಗೆ ಅಪಘಾತ ಕರ್ತವ್ಯ ನಿರತ ಸಂಗಯ್ಯ.ಎಂ, ಗೃಹರಕ್ಷಕ ಸ್ಥಳದಲ್ಲಿಯೇ ಸಾವು.