ಅರಬಿಳಚಿ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಖಾಲಿ ಇರುವ ಕ್ಲರ್ಕ್ ಕಂ ಡಾಟಾ ಎಂಟ್ರಿ ಅಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ.

ಹದ್ದಿನಕಣ್ಣು ಮೀಡಿಯಾ ಕನ್ನಡ ಡಿಜಿಟಲ್ 29-08-2026
ಭದ್ರಾವತಿ : ಅರಬಿಳಚಿ ಗ್ರಾಮ ಪಂಚಾಯತಿ  ಕಚೇರಿಯಲ್ಲಿ ಖಾಲಿ ಇರುವ ಕ್ಲರ್ಕ್ ಕಂ  ಡಾಟಾ ಎಂಟ್ರಿ ಅಪರೇಟರ್ ಹುದ್ದೆಗೆ ಅರ್ಜಿ ಕರೆಯಲಾಗಿದೆ.
1. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಸಾಮಾನ್ಯ ಅಂಗವಿಕಲರಾಗಿದ್ದು ಈ ಕೆಳಕಂಡಂತೆ ಇರುವ ಅರ್ಹತೆಯನ್ನು ಹೊಂದಿರತಕ್ಕದ್ದು.

2.  ವಿಧ್ಯಾರ್ಹತೆ : ಕನ್ನಡವನ್ನು ಒಂದು ಭಾಷೆಯನ್ನಾಗಿ ಅಭ್ಯಾಸಿಸಿ ದ್ವಿತೀಯ ಪಿ.ಯು.ಸಿಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ  ಕನ್ನಡವನ್ನು ಒಂದು ಭಾಷೆಯನ್ನಾಗಿ ಅಭ್ಯಾಸಿಸಿ | ಸಿ.ಬಿ.ಎಸ್.ಸಿ 12ನೇ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಅಥವಾ ಕನ್ನಡವನ್ನು ಒಂದು ಭಾಷೆಯನ್ನಾಗಿ ಅಭ್ಯಾಸಿಸಿ | ಐ.ಎಸ್.ಸಿ. ಮಂಡಳಿಯು ನಡೆಸುವ 12ನೇ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಕನ್ನಡವನ್ನು ಒಂದು ಭಾಷೆಯನ್ನಾಗಿ ಅಭ್ಯಾಸಿಸಿ | ಇತರೆ ರಾಜ್ಯದ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 12 ನೇ ಪರೀಕ್ಷೆ ತೇರ್ಗಡೆಯಾಗಿರಬೇಕು. ಅಥವಾ ಕನ್ನಡವನ್ನು ಒಂದು ಭಾಷೆಯನ್ನಾಗಿ ಅಭ್ಯಾಸಿಸಿ | ಇನ್‌ಸ್ಟಿಟ್ಯೂಟ್ ಆಫ್ ಓಪನ್ (ಎನ್ ಐ ಓ ಎಸ್) ವತಿಯಿಂದ ನ್ಯಾಷನಲ್ ಸ್ಕೂಲಿಂಗ್ ನಡೆಸುವ ಕೋರ್ಸ್/ಹೆಚ್.ಎಸ್.ಸಿ.ಯಲ್ಲಿ ಉನ್ನತ ಪ್ರೌಢ ಶಿಕ್ಷಣ ಹೊಂದಿರಬೇಕು. ಅಥವಾ ತೇರ್ಗಡೆ  ಕನ್ನಡವನ್ನು ಒಂದು ಭಾಷೆಯನ್ನಾಗಿ ಅಭ್ಯಾಸಿಸಿ ಮೂರು ವರ್ಷಗಳ ವೃತ್ತಿ ಡಿಪ್ಲೊಮಾ(ಜೆ.ಓ.ಸಿ/ಜೆ.ಓ.ಡಿ.ಸಿ/ಜೆ.ಎಲ್.ಡಿ.ಸಿ) ಶಿಕ್ಷಣ ಅಭ್ಯರ್ಥಿಗಳು ಎನ್.ಐ.ಓ.ಎಸ್ ನ ವತಿಯಿಂದ ನಡೆಸುವ ಒಂದು ಭಾಷಾ ಕೋರ್ಸ್ ಮತ್ತು ಒಂದು ಶೈಕ್ಷಣಿಕ ವಿಷಯದಲ್ಲಿ (ದೂರಕಲಿಕೆ ಮಾದರಿಯಲ್ಲಿ) ಅಥವಾ ಪದವಿ ಪೂರ್ವ ಮಂಡಳಿಯು ನಡೆಸುವ ಪರೀಕ್ಷೆಯಲ್ಲಿ ಒಂದು ಭಾಷೆ ಒಂದು ವಿಷಯದಲ್ಲಿ ಉತ್ತೀರ್ಣರಾದಲ್ಲಿ ಮಾತ್ರ ಪಿಯುಸಿಗೆ ತತ್ಸಮಾನವೆಂದು ಪರಿಗಣಿಸಬಹುದು. 

3.  ಕಂಪ್ಯೂಟರ್ ತರಬೇತಿ : ಕಂಪ್ಯೂಟರ್ ತರಬೇತಿ ಕೋರ್ಸ್‌ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ 06 ತಿಂಗಳ ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.(ಖಾಸಗಿ ಸಂಸ್ಥೆಯಿಂದ ಕಂಪ್ಯೂಟರ್ ಪ್ರಮಾಣ ಪತ್ರ ಪಡೆದಿದ್ದಲ್ಲಿ ಸಂಸ್ಥೆಯು ಸರ್ಕಾರದಿಂದ ಮಾನ್ಯತೆ ಪಡೆದಿರುವ ಪ್ರಮಾಣ ಪತ್ರವನ್ನು (Government Recognised certificate) ಹಾಜರುಪಡಿಸ ಬೇಕಾಗಿರುತ್ತದೆ.

 4. ವಾಸಸ್ಥಳ ಅರ್ಹತೆ : ಅರಬಿಳಚಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಖಾಲಿ ಇರುವ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ  ಅರಬಿಳಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಮತ್ತು ಸಂಬಂಧಪಟ್ಟ ತಹಶೀಲ್ದಾರರಿಂದ ಪಡೆದ ವಾಸ ಸ್ಥಳ ದೃಢೀಕರಣ ಪತ್ರವನ್ನು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ಪಡೆದು ಸಲ್ಲಿಸತಕ್ಕದ್ದು.

5.ವಯೋಮಿತಿ : ಕರ್ನಾಟಕ ನಾಗರೀಕ ಸೇವೆಗಳು (ಸಾಮಾನ್ಯ ನೇಮಕಾತಿಗಳು) ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು 18 ವರ್ಷ ವಯಸ್ಸನ್ನು ತುಂಬಿರತಕ್ಕದ್ದು, ಹಾಗೂ ಸರ್ಕಾರದ ಆದೇಶ ಸಂಖ್ಯೆ. ಸಿಆಸುಇ 262 ಸೇನೆನಿ 2025 ದಿನಾಂಕ:29-01-2026 ರಲ್ಲಿ ಆದೇಶಿಸಿರುವಂತೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 05 ವರ್ಷಗಳ ಸಡಿಲಿಕೆ ನೀಡಿದ್ದು, ಈ ಹಿನ್ನಲೆಯಲ್ಲಿ ಅದನ್ನು ಅಳವಡಿಸಿಕೊಂಡ ನಂತರ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಈ ಕೆಳಕಂಡ ಗರಿಷ್ಠ ವಯೋಮಿತಿಯನ್ನು ಮೀರರಬಾರದು.

6. ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ
ಎ . ಸಾಮಾನ್ಯ ವರ್ಗ : 40 ವರ್ಷ
ಬಿ. ಪ್ರವರ್ಗ - 2ಎ, 2ಬಿ. 3ಎ ಮತ್ತು 3ಬಿ : 43 ವರ್ಷ
ಸಿ . ಪ.ಜಾತಿ/ಪ.ಪಂ/ಪ್ರವರ್ಗ-1 :  45 ವರ್ಷ

7.  ಅರ್ಜಿ ಸಲ್ಲಿಸಲು ಪ್ರಾರಂಭಿಕ ಮತ್ತು ಕಡೆಯ 
ದಿನಾಂಕದ ವಿವರ 

ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 27-08-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25-09-2026
ಶುಲ್ಕವನ್ನು ಪಾವತಿ ಮಾಡಲು ಕೊನೆಯ 
ದಿನಾಂಕ: 25-09-2026

8. ಅರ್ಜಿ ಶುಲ್ಕದ ವಿವರಗಳು
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ : 50/-
ಇತರೆ ಅಭ್ಯರ್ಥಿಗಳು : 100/-

 ಅರ್ಜಿ ಶುಲ್ಕವನ್ನು  ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್, ಶಿವಮೊಗ್ಗ, ರವರ ಹೆಸರಿಗೆ ಡಿ.ಡಿಯನ್ನು ಪಡೆದು ಅರ್ಜಿಯೊಂದಿಗೆ ಆಯಾ ಗ್ರಾಮ ಪಂಚಾಯಿತಿಯಲ್ಲಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ಸಲ್ಲಿಸತಕ್ಕದ್ದು.

ಅರ್ಜಿ ಸಲ್ಲಿಸುವ ವಿಧಾನ ಮತ್ತು ವೇಳಾಪಟ್ಟಿ:
Website https://shivamogga.nic.in ಡೌನ್‌ಲೋಡ್ ಮಾಡಿ ದಾಖಲೆಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸುವುದು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್, ಶಿವಮೊಗ್ಗ ರವರ ಹೆಸರಿಗೆ ಡಿ.ಡಿ ಪಡೆದು ಡಿ.ಡಿಯನ್ನು ಅರ್ಜಿಯೊಂದಿಗೆ ಲಗತ್ತಿಸಿ, ಖುದ್ದಾಗಿ ಸಂಬಂದಪಟ್ಟ ಗ್ರಾಮ ಪಂಚಾಯತಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸಲ್ಲಿಸಿ ಸ್ವೀಕೃತಿಯನ್ನು ಪಡೆದಿಟ್ಟುಕೊಳ್ಳತಕ್ಕದ್ದು, ದಾಖಲಾತಿ ಪರಿಶೀಲನಾ ಸಮಯದಲ್ಲಿ ಸ್ವೀಕೃತಿಯನ್ನು ಹಾಜರು ಪಡಿಸುವುದು. ಡಿ.ಡಿ. ಸಲ್ಲಿಸದೇ ಇದ್ದಲ್ಲಿ ನೇಮಕಾತಿಗೆ ಪರಿಗಣಿಸಲಾಗು ವುದಿಲ್ಲವೆಂದು ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಶಿವಮೊಗ್ಗ ಜಿಲ್ಲೆ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಅರಬಿಳಚಿ ಗ್ರಾಮ ಪಂಚಾಯತಿ ಕಚೇರಿ ರವರನ್ನು ಸಂಪರ್ಕಿಸಬಹುದಾಗಿದೆ.

Popular posts from this blog

ಹಾರನಹಳ್ಳಿ ಗೃಹರಕ್ಷಕದಳ ಘಟಕದ ವತಿಯಿಂದ ಮಹಿಳೆಯರಿಗೆ ಸನ್ಮಾನ.

ಭದ್ರಾವತಿ ನಗರದ ಮೂಲೆಕಟ್ಟೆಯಲ್ಲಿ ಕಾರು ಬೈಕ್ ಗೆ ಅಪಘಾತ ಕರ್ತವ್ಯ ನಿರತ ಸಂಗಯ್ಯ.ಎಂ, ಗೃಹರಕ್ಷಕ ಸ್ಥಳದಲ್ಲಿಯೇ ಸಾವು.