ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲು ಪ್ರಜಾಸೇವಾ ಆಂದೋಲನ ಸಭೆ.

ಹದ್ದಿನಕಣ್ಣು ಡಿಜಿಟಲ್ ಮೀಡಿಯಾ 18-10-2026
ಭದ್ರಾವತಿ: ಶಿವಮೊಗ್ಗ ಜಿಲ್ಲಾಡಳಿತದ ವತಿಯಿಂದ  ಹೊಳೆಹೊನ್ನೂರು 2ನೇ ಹೋಬಳಿಯ ಆನವೇರಿಯಲ್ಲಿ
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪೂರ್ಯಾನಾಯ್ಕ್ ರವರ ಅಧ್ಯಕ್ಷತೆಯಲ್ಲಿ "ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ" ಅಭಿಯಾನ ದಡಿ ಪ್ರಜಾಸೇವೆ ಆಂದೋಲನಾ ಸಭೆ ಆಯೋಜಿಸ ಲಾಗಿತ್ತು.
      ಪ್ರಜಾಸೇವಾ ಸಭೆಯಲ್ಲಿ ಸಾರ್ವಜನಿಕರಿಗೆ ಸರ್ಕಾರಿ ಸೌಲಭ್ಯಗಳು ಹಾಗೂ ವಿವಿಧ ಇಲಾಖೆಗಳ ಸೇವೆಗಳನ್ನು ತಲುಪಿಸುವ ಉದ್ದೇಶದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವುದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಆಡಳಿತ ವ್ಯವಸ್ಥೆಯನ್ನು 
ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ಗಳು ಮಹತ್ವದ ಪಾತ್ರ ವಹಿಸುತ್ತವೆ ಎನ್ನಲಾಗಿದೆ.

ಜನರು ತಮ್ಮ ಸಮಸ್ಯೆಗಳನ್ನು ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ  ತಂದು ಸರ್ಕಾರಿ ಪ್ರಜಾಸೇವೆ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಪ್ರಜಾಸೇವಾ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ.

ಸಭೆಯಲ್ಲಿ ತಹಶೀಲ್ದಾರ್ ಮತ್ತು ತಾಲ್ಲೂಕು ಮಟ್ಟದ  ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಜನಪ್ರತಿ ನಿಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಬ್ಯೂರೋ ವರದಿ

Popular posts from this blog

ಅರಬಿಳಚಿ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಖಾಲಿ ಇರುವ ಕ್ಲರ್ಕ್ ಕಂ ಡಾಟಾ ಎಂಟ್ರಿ ಅಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ.

ಹಾರನಹಳ್ಳಿ ಗೃಹರಕ್ಷಕದಳ ಘಟಕದ ವತಿಯಿಂದ ಮಹಿಳೆಯರಿಗೆ ಸನ್ಮಾನ.

ಭದ್ರಾವತಿ ನಗರದ ಮೂಲೆಕಟ್ಟೆಯಲ್ಲಿ ಕಾರು ಬೈಕ್ ಗೆ ಅಪಘಾತ ಕರ್ತವ್ಯ ನಿರತ ಸಂಗಯ್ಯ.ಎಂ, ಗೃಹರಕ್ಷಕ ಸ್ಥಳದಲ್ಲಿಯೇ ಸಾವು.