ಭದ್ರಾವತಿ ಹೊಸಮನೆ ಪೋಲಿಸರ ಕಾರ್ಯಾಚರಣೆ ಕಳ್ಳತನ ಪ್ರಕರಣದ ಆರೋಪಿ ಪೋಲಿಸರ ಬಲೆಗೆ.

ಹದ್ದಿನಕಣ್ಣು ಡಿಜಿಟಲ್ ಮೀಡಿಯಾ 15-10-2026

ಭದ್ರಾವತಿ: ನಗರದ ಹೊಸಮನೆ ತಮ್ಮಣ್ಣ ಕಾಲೋನಿಯಲ್ಲಿ ಬೀಗ ಹಾಕಿದ್ದ ಮನೆಯೊಂದರಲ್ಲಿ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಹೊಸಮನೆ ಪೋಲಿಸ್ ಠಾಣೆ ಪೋಲಿಸರ ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ ಕಳುವಾಗಿದ್ದ ಚಿನ್ನದ ಮಾಂಗಲ್ಯ ಸರವನ್ನು ವಶಪಡಿಸಿ ಕೊಳ್ಳಲಾಗಿದೆ.

ತಮ್ಮಣ್ಣ ಕಾಲೋನಿಯ ನಿವಾಸಿ ವಿಜಯ ಎಂಬುವವರ ಮನೆಯಲ್ಲಿ ಈ ಕಳ್ಳತನ ನಡೆದಿದ್ದು, ಮನೆಯ ಬಾಗಿಲಿಗೆ ಬೀಗ ಹಾಕಿದ್ದ ಸಂದರ್ಭದಲ್ಲಿ ಒಳನುಗ್ಗಿದ ಕಳ್ಳರು ಚಿನ್ನಾಭರಣ ಗಳನ್ನು ಕಳವು ಮಾಡಿದ್ದರು ಎನ್ನಲಾಗಿದೆ. ಘಟನೆಯಲ್ಲಿ ಒಟ್ಟು 48 ಗ್ರಾಂ ತೂಕದ ಚಿನ್ನಾಭರಣಗಳು ಕಳುವಾಗಿದ್ದು, ಅವುಗಳ ಅಂದಾಜು ಮೌಲ್ಯ 4,80,000 ರೂ. ಎಂದು ತಿಳಿಸಲಾಗಿದೆ.

ಕಳುವಾದ ಚಿನ್ನಾಭರಣಗಳಲ್ಲಿ 44 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಹಾಗೂ ನಾಲ್ಕು ಚಿನ್ನದ ಉಂಗುರಗಳು ಸೇರಿವೆ. ಈ ಸಂಬಂಧ ಸಂತ್ರಸ್ತರು ನೀಡಿದ ದೂರಿನ ಮೇರೆಗೆ ಹೊಸಮನೆ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 305ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.

        ಕಾರ್ಯಾಚರಣೆಯಲ್ಲಿ ಆರೋಪಿ ಬಂಧನ: 

ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಕಾರ್ಯಪ್ರವೃತ್ತ ರಾದ ಹೊಸಮನೆ ಪೊಲೀಸರು, ತಮ್ಮಣ್ಣ ಕಾಲೋನಿಯ 19 ವರ್ಷದ ಪ್ರೇಮ್ ಕುಮಾರ್ ಅಲಿಯಾಸ್ ಗಾಂಧಿ ಎಂಬಾತ ನನ್ನು ಬಂಧಿಸಿದ್ದಾರೆ. ಆರೋಪಿಯನ್ನು ವಿಚಾರಣೆಗೆ ಒಳಪಡಿಸಿ, ಆತನಿಂದ 44 ಗ್ರಾಂ 300 ಮಿಲಿಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ವಶಪಡಿಸಿಕೊಳ್ಳಲಾಗಿದೆ ಎನ್ನಲಾಗಿದೆ.

ವಶಪಡಿಸಿಕೊಂಡ ಮಾಂಗಲ್ಯ ಸರದ ಅಂದಾಜು ಮೌಲ್ಯ 6,20,000 ರೂ. ಎಂದು ಪೊಲೀಸರು ತಿಳಿಸಿದ್ದಾರೆ. ಕಳವು ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಭಾಗಿಯಾಗಿರುವ ಶಂಕೆಯಿದ್ದು, ಸದ್ಯ ಆತ ತಲೆಮರೆಸಿ ಕೊಂಡಿದ್ದು, ಆತನ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರೆದಿದ್ದು, ಕಳ್ಳತನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸರು ತ್ವರಿತವಾಗಿ ಕಾರ್ಯಾಚರಣೆ ನಡೆಸಿರುವುದು ಗಮನಾರ್ಹವಾಗಿದೆ, ಪ್ರಕರಣದಲ್ಲಿ ಭಾಗಿಯಾಗಿರುವ ಮತ್ತೊಬ್ಬ ಆರೋಪಿಯ ಪತ್ತೆ ಹಾಗೂ ಉಳಿದ ಚಿನ್ನಾಭರಣಗಳ ವಶಪಡಿಸಿಕೊಳ್ಳುವ ನಿಟ್ಟಿನಲ್ಲಿ ತನಿಖೆ ಮುಂದುವರೆಸಿದ್ದಾರೆ.

ಕಳ್ಳತನ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿ, ಚಿನ್ನದ ಮಾಂಗಲ್ಯ ಸರವನ್ನು ವಶಪಡಿಸಿ ಕೊಳ್ಳುವಲ್ಲಿ ಯಶಸ್ವಿಯಾದ ಹೊಸಮನೆ ಶಿವಾಜಿ ಸರ್ಕಲ್ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿಯ ಕಾರ್ಯವೈಖರಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕಾರಿಯಪ್ಪ ಅವರು ಪ್ರಶಂಸೆ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

ಬ್ಯೂರೋ ವರದಿ.

Popular posts from this blog

ಅರಬಿಳಚಿ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಖಾಲಿ ಇರುವ ಕ್ಲರ್ಕ್ ಕಂ ಡಾಟಾ ಎಂಟ್ರಿ ಅಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ.

ಹಾರನಹಳ್ಳಿ ಗೃಹರಕ್ಷಕದಳ ಘಟಕದ ವತಿಯಿಂದ ಮಹಿಳೆಯರಿಗೆ ಸನ್ಮಾನ.

ಭದ್ರಾವತಿ ನಗರದ ಮೂಲೆಕಟ್ಟೆಯಲ್ಲಿ ಕಾರು ಬೈಕ್ ಗೆ ಅಪಘಾತ ಕರ್ತವ್ಯ ನಿರತ ಸಂಗಯ್ಯ.ಎಂ, ಗೃಹರಕ್ಷಕ ಸ್ಥಳದಲ್ಲಿಯೇ ಸಾವು.